alex Certify ‘ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ’ : ಆರಗ ಜ್ಞಾನೇಂದ್ರ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ’ : ಆರಗ ಜ್ಞಾನೇಂದ್ರ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು : ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು. ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಾಜಿ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಖಂಡನೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು. ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ. ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ. ಆರಗ ಜ್ಞಾನೇಂದ್ರ ಅವರು ಒಂದೇ ಒಂದು ದಿನ ಮಣ್ಣು ಹೊತ್ತರೆ ಅವರ ಮೈಬಣ್ಣವೂ ಕಪ್ಪಗಾಗುತ್ತದೆ. ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ. ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾ ಸಾಹೇಬರ ಸಂವಿಧಾನದ ಕಾಲ ಎಂದು ಪ್ರಿಯಾಂಕ್ ಖರ್ಗೆ ಖಂಡನೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...