ಬೆಂಗಳೂರು: ಕಾಂಗ್ರೆಸ್ ನ 40-45 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಮೊದಲು ಸಂತೋಷ್, ತಮ್ಮ ಶಾಸಕರು, ಸಂಸದರ ಸಂಪರ್ಕದಲ್ಲಿಟ್ಟುಕೊಳ್ಳಲಿ ಬಳಿಕ ಕಾಂಗ್ರೆಸ್ ಶಾಸಕರ ಬಗ್ಗೆ ಮಾತನಾಡಲಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿ.ಎಲ್ ಸಂತೋಷ್ ಅವರಿಗೆ ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇನೆ. 45 ಶಾಸಕರಲ್ಲ, ನಾಲ್ಕೇ ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಿ ನೋಡೋಣ ಎಂದು ಸವಾಲು ಹಾಕಿದರು.
ವಿಧಾನಸಭಾ ಚುನಾವಣೆ ವೇಳೆ ಯಡಿಯೂರಪ್ಪ ಬಣಕ್ಕೆ ಟಿಕೆಟ್ ಕೊಟ್ಟಿಲ್ಲ. ಸಂತೋಷ್ ಪಡೆ ಕಟ್ಟುವ ಸಲುವಾಗಿ ಲಿಂಗಾಯಿತರಿಗೆ ಟಿಕೆಟ್ ನೀಡಲಿಲ್ಲ. ಹಾಗಾಗಿ ಬಿಜೆಪಿ ಪ್ಲಾನ್ ವಿಫಲವಾಯಿತು ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ. ಈ ಬಗ್ಗೆ ಮೊದಲು ಸಂತೋಷ್ ಉತ್ತರ ಕೊಡಲಿ ಎಂದು ಹೇಳಿದರು.