![](https://kannadadunia.com/wp-content/uploads/2023/06/priyank-kharge1654339617.jpg)
ಬೆಂಗಳೂರು: ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ವಿರೋಧ ಪಕ್ಷದವರನ್ನು ಮುಗಿಸಬೇಕು ಅಂತಾ ಸಂಚು ರೂಪಿಸುತ್ತಲೇ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ವಿಪಕ್ಷದವರ ಧ್ವನಿ ಕಟ್ಟಿಹಾಕಲು ಕೆಲವರನ್ನು ಐಟಿ, ಇಡಿ ಮೂಲಕ ಹೆದರಿಸುತ್ತಿದೆ. ಎಐಸಿಸಿ ಅಧ್ಯಕ್ಷರಿಂದ ಹಿಡಿದು ಕೆಪಿಸಿಸಿ ಅಧ್ಯಕ್ಷರವರೆಗೂ ನಾಯಕರ ವಿರುದ್ಧ ಸಂಚು ರೂಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನವಶ್ಯಕವಾಗಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಹಿಂದಿನ ಬಿಜೆಪಿ ಸರ್ಕಾರ ಪ್ರಾಮಾಣಿಕವಾಗಿ ಸಂಚು ರೂಪಿಸುವ ಕೆಲಸ ಮಾಡಿತ್ತು. ಕೊಲೆ ಮಾಡಿದವರಿಗೂ ಏನೂ ಮಾಡಿಲ್ಲ. ಆದರೆ ನಮ್ಮ ನಾಯಕರನ್ನು ಮಾತ್ರ ಹೆದರಿಸುವ ಕೆಲಸ ಮಾಡುತ್ತಿತ್ತು ಎಂದು ಆರೋಪಿಸಿದ್ದಾರೆ.