ಕಾಂಗ್ರೆಸ್ನಲ್ಲಿ ಸಿಎಂ ಅಭ್ಯರ್ಥಿ ಚರ್ಚೆ ವಿಚಾರವಾಗಿ ಬಿಜೆಪಿ ನಾಯಕರು ನೀಡಿದ ಹೇಳಿಕೆಗಳಿಗೆ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಭರ್ಜರಿ ಟಾಂಗ್ ನೀಡಿದ್ದಾರೆ. ಕಲಬುರಗಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಸಿಎಂ ಯಾರು ಎಂಬ ಚರ್ಚೆಯೇ ಈ ಸಂದರ್ಭದಲ್ಲಿ ಅಪ್ರಸ್ತುತವಾಗಿದೆ. ಕೊರೊನಾ ಸಂದರ್ಭದಲ್ಲಿ ಜನರಿಗೆ ನೆರವಾಗುವ ಬಗ್ಗೆ ಮಾತ್ರ ನಮ್ಮ ಯೋಚನೆ ಇರಬೇಕು ಎಂದು ಹೇಳಿದ್ರು.
ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಂಪಾದಿಸಿದ ಬಳಿಕ ಹೈಕಮಾಂಡ್ ಸಿಎಂ ಯಾರೆಂದು ಆಯ್ಕೆ ಮಾಡುತ್ತದೆ. ಬಿಜೆಪಿ ಮನೆಯೊಂದು ಮೂರು ಬಾಗಿಲಲ್ಲ. ನೂರು ಬಾಗಿಲಾಗಿದೆ. ನಮ್ಮಲ್ಲಿ ಸಿಎಂ ಸ್ಥಾನಕ್ಕೆ ಅರ್ಹರಾದವರು ತುಂಬಾ ಜನ ಇದ್ದಾರೆ. ಅದಕ್ಕೆ ಈ ರೀತಿ ಚರ್ಚೆ ನಡೆಯುತ್ತೆ. ಆದರೆ ಬಿಜೆಪಿಯಲ್ಲಿ ಯಡಿಯೂರಪ್ಪ ಬಿಟ್ಟರೆ ಇನ್ಯಾರೂ ಇಲ್ಲ. ಮೊದಲು ನಿಮ್ಮ ಮನೆಯ ಸಮಸ್ಯೆ ಸರಿ ಮಾಡಿಕೊಳ್ಳಿ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರ ಕಿವಿ ಹಿಂಡಿದ್ರು.
ಜಮೀರ್ ಅವರ ವೈಯಕ್ತಿಕ ಅಭಿಪ್ರಾಯಗಳನ್ನ ಹೊರಹಾಕಿದ್ದಾರೆ. ಆದರೆ ಪಕ್ಷ ಕಟ್ಟುವ ಸಾಮರ್ಥ್ಯ ಹಾಗೂ ಜವಾಬ್ದಾರಿ ಹೊಂದಿರುವ ನಾಯಕ ಈ ರೀತಿ ಮಾತನಾಡೋದಿಲ್ಲ ಎಂದು ಹೇಳುವ ಮೂಲಕ ಜಮೀರ್ಗೂ ಟಾಂಗ್ ನೀಡಿದ್ರು.