ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕರಾದ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ.
ಉತ್ತರ ಪ್ರದೇಶ ರಾಜಧಾನಿ ಲಖ್ನೋಗೆ ವಿಸ್ತಾರ ವಿಮಾನದಲ್ಲಿ ತೆರಳುವಾಗ ಇಬ್ಬರು ಆಕಸ್ಮಿಕವಾಗಿ ಭೇಟಿಯಾಗಿದ್ದು, ಉಭಯಕುಶಲೋಪರಿ ವಿಚಾರಿಸಿದ್ದಾರೆ. ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.
ಇದೊಂದು ಆಕಸ್ಮಿಕ ಭೇಟಿಯಾಗಿದ್ದು, ಸೌಹಾರ್ದಯುತ ಮಾತುಕತೆ ನಡೆದಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಹಾಯಕ ತಿಳಿಸಿದ್ದಾರೆ. ಅವರಿಬ್ಬರೂ, ಮತ್ತೊಮ್ಮೆ ಭೇಟಿಯಾಗುವ ಬಗ್ಗೆ ಪರಸ್ಪರ ಹೇಳಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಅಖಿಲೇಶ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಭೇಟಿಯಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವೆ ಮೈತ್ರಿಯಾಗಬಹುದೆ ಎಂಬ ಚರ್ಚೆಗೂ ಕಾರಣವಾಗಿದೆ. ಆದರೆ, ಉಭಯ ಪಕ್ಷಗಳ ನಾಯಕರು ಇದನ್ನು ಅಲ್ಲಗಳೆದಿದ್ದಾರೆ.