alex Certify ಇಂದಿರಾ ಗಾಂಧಿಗೆ ರಾಜಕೀಯ ಮರು ಜನ್ಮ ನೀಡಿದ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿರಾ ಗಾಂಧಿಗೆ ರಾಜಕೀಯ ಮರು ಜನ್ಮ ನೀಡಿದ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಚಿಕ್ಕಮಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಜನ್ಮ ನೀಡಿದ ಚಿಕ್ಕಮಗಳೂರು ಜಿಲ್ಲೆಗೆ ಇದೇ ಮೊದಲ ಬಾರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಲಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಿಯಾಂಕಾ ಗಾಂಧಿ ಇಂದು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಲಿದ್ದಾರೆ. ಶೃಂಗೇರಿಗೆ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆಯಲಿದ್ದಾರೆ. ನಂತರ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡು ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೆ ಭೇಟಿ ನೀಡಲಿದ್ದಾರೆ.

ಕಲಾರಂಗ ಕ್ರೀಡಾಂಗಣದಲ್ಲಿ ನಡೆಯುವ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಹಿರೇಕೆರೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...