alex Certify ವಿಧಾನಸಭೆ ಚುನಾವಣೆ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ: ಏ. 25 ರಂದು ಭರ್ಜರಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭೆ ಚುನಾವಣೆ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ: ಏ. 25 ರಂದು ಭರ್ಜರಿ ಪ್ರಚಾರ

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಅವರ ಮೈಸೂರು ಜಿಲ್ಲಾ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದೆ.

ಏಪ್ರಿಲ್ 25 ರಂದು ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಟಿ. ನರಸೀಪುರ ಕ್ಷೇತ್ರದ ಹೆಳವರಹುಂಡಿಯಲ್ಲಿ ಸಾರ್ವಜನಿಕ ಸಮಾರಂಭ ಏರ್ಪಡಿಸಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ನಡೆಯುವ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದು, ನಂತರ ಹನೂರು ಕ್ಷೇತ್ರಕ್ಕೆ ತೆರಳಲಿದ್ದಾರೆ. ಗೌರಿಶಂಕರ್ ಕನ್ವೆನ್ಷನ್ ಹಾಲ್ ನಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮಹಿಳೆಯರ ಜೊತೆಗೆ ಸಂವಾದ ನಡೆಯಲಿದ್ದು, ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ. ನಂತರ ಕೆಆರ್ ನಗರದಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5:30 ರಿಂದ 6:30ರ ವರೆಗೆ ಕೆಆರ್ ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ತೋಪಮ್ಮನ ದೇವಸ್ಥಾನದಿಂದ ಎರಡು ಕಿಲೋಮೀಟರ್ ರೋಡ್ ಶೋ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...