
ಲಖ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಭದ್ರತಾ ವಾಹನಗಳ ಮಧ್ಯೆ ಡಿಕ್ಕಿಯಾಗಿದೆ. ಉತ್ತರಪ್ರದೇಶದ ಹಾಪುರ್ ನಲ್ಲಿ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್ ಭದ್ರತಾ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಂಪುರಕ್ಕೆ ಪ್ರಿಯಾಂಕ ಗಾಂಧಿ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ದೆಹಲಿ ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡ ರೈತ ನವರಿತ್ ಸಿಂಗ್ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಲು ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ರಾಂಪುರಕ್ಕೆ ತೆರಳುತಿದ್ದರು. ಈ ವೇಳೆ ಬೆಂಗಾವಲು ಪಡೆಯ ವಾಹನಗಳು ಹಾಪುರ ರಸ್ತೆಯ ಗರ್ಮುಕ್ತೇಶ್ವರ್ ಬಳಿ ಡಿಕ್ಕಿ ಹೊಡೆದುಕೊಂಡಿವೆ. ಅಪಘಾತದಲ್ಲಿ ಯಾರಿಗೂ ಗಾಯವಾಗಿಲ್ಲ.