
ಮೈಸೂರು: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಬಿಜೆಪಿ ದೂರು ನೀಡಿದೆ. ಮೈಸೂರು ಜಿಲ್ಲೆಯ ಕೆಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ಪ್ರಿಯಾಂಕಾ ಗಾಂಧಿಯವರು ಲಿಂಗಾಯಿತರನ್ನು ಬಿಜೆಪಿ ಅವಮಾನಿಸುತ್ತಿದೆ ಎಂದು ಹೇಳುವ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ ಕಾನೂನು ಘಟಕದ ಜಿಲ್ಲಾ ಸಂಚಾಲಕ ಸಿ.ಕೆ. ರುದ್ರಮೂರ್ತಿ ಅವರು ಜಿಲ್ಲಾ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದು, ಪ್ರಿಯಾಂಕಾ ಗಾಂಧಿ ತಮ್ಮ ಭಾಷಣದಲ್ಲಿ ಜಾತಿ, ಧರ್ಮ ಬಳಸಿ ಚುನಾವಣೆ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಇಂತಹ ಹೇಳಿಕೆಗಳು ಚುನಾವಣೆ ಸಂದರ್ಭದಲ್ಲಿ ಪಕ್ಷ ಮತ್ತು ಅಭ್ಯರ್ಥಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.