ಮೈಸೂರು: ನಾಳೆ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ನಿಮಿತ್ತ ಇಂದು ಮೈಸೂರಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ವರಿಷ್ಠರು, ಮಾರ್ಗದರ್ಶಕರಾದ ಸೋನಿಯಾ ಗಾಂಧಿಯವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.
ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ನಾಳೆ ಕಾಂಗ್ರೆಸ್ನ ಹಿರಿಯ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಬುಧವಾರ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಕಲ್ಪೆಟ್ಟಾ ಹೊಸ ಬಸ್ ನಿಲ್ದಾಣದಿಂದ ಬೆಳಿಗ್ಗೆ 11 ಗಂಟೆಗೆ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಜಿಲ್ಲಾಧಿಕಾರಿ ಎದುರು ನಾಮಪತ್ರ ಸಲ್ಲಿಸಲಾಗುವುದು.
ಪ್ರಿಯಾಂಕಾ ಗಾಂಧಿಯವರಿಗೆ ಇದು ಮೊದಲ ಚುನಾವಣಾ ಸ್ಪರ್ಧೆಯಾಗಿದೆ. ಸಕ್ರಿಯ ರಾಜಕೀಯಕ್ಕೆ ಸೇರಿದ ಐದು ವರ್ಷಗಳ ನಂತರ ಅವರು ಸ್ಪರ್ಧಿಸುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ.