
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಸೀತಾಪುರದ ಅತಿಥಿಗೃಹದ ಮಹಡಿಯನ್ನು ಗುಡಿಸುತ್ತಿರುವ ದೃಶ್ಯ ಕಂಡು ಬಂದಿದ್ದು, ಈ ವಿಡಿಯೋವನ್ನು ಕಾಂಗ್ರೆಸ್ ಹಂಚಿಕೊಂಡಿದೆ.
ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕರ ಗುಂಪನ್ನು ಸೋಮವಾರ ಮುಂಜಾನೆ ಉತ್ತರ ಪ್ರದೇಶದ ಲಖಿಂಪುರ್ ಖೇರಿಗೆ ಹೋಗುತ್ತಿದ್ದಾಗ ಬಂಧಿಸಲಾಯಿತು. ಪ್ರಿಯಾಂಕಾ ಗಾಂಧಿಯನ್ನು ಈಗ ಸೀತಾಪುರದ ಅತಿಥಿಗೃಹದಲ್ಲಿ ಇರಿಸಲಾಗಿದ್ದು, ಅಲ್ಲಿ ಅವರು ಅತಿಥಿಗೃಹದ ಮಹಡಿಗಳನ್ನು ಕೈಯಲ್ಲಿ ಪೊರಕೆ ಹಿಡಿದು ಗುಡಿಸಿದ್ದಾರೆ.
ಸಾರ್ವಜನಿಕ ಶೌಚಾಲಯಕ್ಕೆ ಹೋಗೋ ಮುನ್ನ ಹುಷಾರ್: ಈ ವಿಡಿಯೋ ನೋಡಿದ್ರೆ ಬೆಚ್ಚಿ ಬೀಳ್ತೀರಾ..!
ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನ ವಾಹನಕ್ಕೆ ಸಿಲುಕಿ ನಾಲ್ವರು ಪ್ರತಿಭಟನಾನಿರತ ರೈತರು ಮೃತಪಟ್ಟಿದ್ದರೆನ್ನಲಾಗಿತ್ತು. ಹಾಗೂ ನಂತರ ನಡೆದ ಘರ್ಷಣೆಯಲ್ಲಿ ನಾಲ್ವರು ಮೃತಪಟ್ಟಿದ್ದರು. ಇದು ಈ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆಗೆ ಕಾರಣವಾಯಿತು. ಇದನ್ನು ತಿಳಿದ ಪ್ರಿಯಾಂಕಾ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರು ತಕ್ಷಣವೇ ಲಖಿಂಪುರ್ ಖೇರಿಗೆ ತೆರಳಿದ್ದರು. ಆದರೆ ಹಿಂಸಾಚಾರ ಪೀಡಿತ ಪ್ರದೇಶವನ್ನು ತಲುಪುವ ಮೊದಲು ಅವರನ್ನು ಸೀತಾಪುರದಲ್ಲಿ ಬಂಧಿಸಲಾಯಿತು.
ಪ್ರಿಯಾಂಕಾ ಗಾಂಧಿ ಬಂಧನದ ವೇಳೆ ಹೈಡ್ರಾಮಾ…! ಪೊಲೀಸರ ವಿರುದ್ದ ಹರಿಹಾಯ್ದ ಕಾಂಗ್ರೆಸ್ ಯುವನಾಯಕಿ
ಏತನ್ಮಧ್ಯೆ, ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.
