ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಚುನಾವಣಾ ಅಖಾಡದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ವಯನಾಡು ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ಉಪ ಚುನಾವಣೆಯ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ನಿರ್ಧಾರ ಪ್ರಕಟಿಸಿದ್ದು, ಅಭ್ಯರ್ಥಿಯಾಗಿ ಅವರ ಹೆಸರನ್ನು ಘೋಷಣೆ ಮಾಡಿದೆ.
ಕಳೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಈ ಕ್ಷೇತ್ರದಿಂದ ಚುನಾಯಿತರಾಗಿದ್ದರು. ರಾಯಬರೇಲಿ ಕ್ಷೇತ್ರವನ್ನು ಉಳಿಸಿಕೊಂಡ ಅವರು ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ನವೆಂಬರ್ 13ರಂದು ವಯನಾಡು ಕ್ಷೇತ್ರಕ್ಕೆ ಉಪಚುನಾವಣೆ ನಿಗದಿಯಾಗಿದ್ದು, ಪ್ರಿಯಾಂಕ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.