ಚಿಕ್ಕೋಡಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ತಾವೆಲ್ಲರೂ ಸಹಕರಿಸಬೇಕು ಎಂದು ಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ. ಏಪ್ರಿಲ್ 18ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸುತ್ತೇನೆ. ಅಂದು ಕೆಲವೇ ಕೆಲವು ಜನಪ್ರತಿನಿಧಿಗಳು ನನಗೆ ಸಾಥ್ ನೀಡಲಿದ್ದಾರೆ.
ಸುಡು ಬಿಸಿಲಿನಲ್ಲಿ ಕಾರ್ಯಕರ್ತರು ಹಾಗೂ ಬೃಹತ್ ರ್ಯಾಲಿಯಿಂದ ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ತಂದೆ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಹಾಗಾಗಿ ತಂದೆಯವರ ಮಾರ್ಗದರ್ಶನದಂತೆ ಸರಳವಾಗಿ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಅವರು ಮಾಹಿತಿ ನೀಡಿದ್ದಾರೆ.