alex Certify ಹಾದೀಲಿ ಹೋಗೋರಿಗೆ ಟಿಕೆಟ್ ಕೊಡಕ್ಕಾಗುತ್ತಾ..? ಕುಟುಂಬದವರಿಗೆ ಟಿಕೆಟ್ ಆರೋಪ ಮಾಡಿದ ಯತ್ನಾಳ್ ಗೆ ಸತೀಶ್ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾದೀಲಿ ಹೋಗೋರಿಗೆ ಟಿಕೆಟ್ ಕೊಡಕ್ಕಾಗುತ್ತಾ..? ಕುಟುಂಬದವರಿಗೆ ಟಿಕೆಟ್ ಆರೋಪ ಮಾಡಿದ ಯತ್ನಾಳ್ ಗೆ ಸತೀಶ್ ತಿರುಗೇಟು

ಚಿಕ್ಕೋಡಿ: ಹಾದಿಯಲ್ಲಿ ಹೋಗುವವರಿಗೆ ಟಿಕೆಟ್ ನೀಡುವುದಕ್ಕೆ ಆಗುತ್ತಾ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಕುಟುಂಬ ಸದಸ್ಯರಿಗೆ ಮಾತ್ರ ಟಿಕೆಟ್ ನೀಡಲಾಗುತ್ತಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸತೀಶ್ ಜಾರಕಿಹೊಳಿ, ಯಾರೂ ಆಸಕ್ತಿ ತೋರದ ಕಾರಣ ನನ್ನ ಪುತ್ರಿಗೆ ಟಿಕೆಟ್ ನೀಡಲಾಗಿದೆ. ಹಾದಿಯಲ್ಲಿ ಹೋಗುವವರಿಗೆ ಟಿಕೆಟ್ ನೀಡಲು ಆಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿಯಿಂದ ಸ್ಪರ್ಧಿಸಲು ಯಾರೂ ಆಸಕ್ತಿ ತೋರಿಸಲಿಲ್ಲ. ಈ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಮತ್ತು ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ  ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...