ಬೆಳಗಾವಿ: ಗ್ರಾಮ ಪಂಚಾಯಿತಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಯ ಬಳಿ ಲೋಡೆಡ್ ಪಿಸ್ತೂಲ್ ಪತ್ತೆಯಾಗಿದೆ ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿ ಪಿ.ಆರ್.ಓ.ಆಗಿ ನಿಯೋಜನೆಗೊಂಡಿದ್ದ ಅಧಿಕಾರಿ ಕರ್ತವ್ಯಕ್ಕೆ ಬಂದಾಗ ಲೈಸೆನ್ಸ್ ಇರುವ ಪಿಸ್ತೂಲ್ ಜೊತೆಗೆ ತೆಗೆದುಕೊಂಡು ಬಂದಿದ್ದಾರೆ.
ಚುನಾವಣಾ ಸಿಬ್ಬಂದಿಯಿಂದ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ. ಚುನಾವಣಾ ಅಧಿಕಾರಿಗೆ ಮಾಹಿತಿ ನೀಡಿ ಪಿ.ಆರ್.ಓ. ಅವರನ್ನು ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.