
ಕಬಡ್ಡಿ ಅಭಿಮಾನಿಗಳಲ್ಲಿ ಈ ಬಾರಿಯ ಚಾಂಪಿಯನ್ ಯಾರಾಗಬಹುದು ಎಂಬ ಕುತೂಹಲ ಮೂಡಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಇದಕ್ಕೆ ತೆರೆ ಬೀಳಲಿದೆ. ನಾಳೆ ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಗೆದ್ದ ತಂಡಗಳು ಸೆಮಿಫೈನಲ್ ನಲ್ಲಿ ಕಬಡ್ಡಿ ಅಂಕಪಟ್ಟಿಯಲ್ಲಿ ಟೇಬಲ್ ಟಾಪರ್ ಆಗಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ಹಾಗೂ ಪುಣೇರಿ ಪಲ್ಟನ್ ಜೊತೆ ಸೆಣಸಾಡಲಿವೆ.
ನಾಳೆ ಎಲಿಮಿನೇಟರ್ನ ಮೊದಲ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ಮತ್ತು ಪಟ್ನಾ ಪೈರೇಟ್ಸ್ ಮುಖಮುಖಿಯಾದರೆ, ಮತ್ತೊಂದು ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಹರಿಯಾಣ ಸ್ಟೀಲರ್ಸ್ ಕಾದಾಡಲಿವೆ. ಎಲ್ಲಾ ಪಂದ್ಯಗಳು ಹೈದರಾಬಾದ್ ನ ಬಾಲ ಯೋಗಿ ಇಂಡೋರ್ ಸ್ಟೇಡಿಯಂ ನಲ್ಲಿ ನಡೆಯಲಿವೆ.