
ಅಭಿಷೇಕ್ ಬಚ್ಚನ್ ಮಾಲೀಕತ್ವದ ಜೈಪುರ್ ಪಿಂಕ್ ಪ್ಯಾಂಥರ್ಸ್ ತನ್ನ ತವರಿನಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲೂ ಜಯಭೇರಿಯಾಗುವ ಮೂಲಕ ಪ್ರೊ ಕಬಡ್ಡಿ ಅಂಕಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಜಿಗಿದಿದ್ದಾರೆ.
ಜೈಪುರ್ ನಲ್ಲಿದ್ದ ಪ್ರೊ ಕಬಡ್ಡಿ ಪಂದ್ಯಗಳು ಮೊನ್ನೆ ಮುಕ್ತಾಯವಾಗಿದ್ದು, ಇಂದಿನಿಂದ ಜನವರಿ 24ರವರೆಗೆ ಹೈದರಾಬಾದ್ ನಲ್ಲಿ ಪ್ರೊ ಕಬಡ್ಡಿ ಪಂದ್ಯ ನಡೆಯಲಿವೆ.
ಇಂದು ಮೊದಲ ಪಂದ್ಯದಲ್ಲೇ ತೆಲುಗು ಟೈಟನ್ಸ್ ಹಾಗೂ ಬೆಂಗಳೂರು ಬುಲ್ಸ್ ಮುಖಾಮುಖಿಯಾಗುತ್ತಿದ್ದು, ಪ್ರೊ ಕಬಡ್ಡಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಉಳಿದುಕೊಂಡಿರುವ ತೆಲುಗು ಟೈಟನ್ಸ್ ತಮ್ಮ ಹೋಂ ಗ್ರೌಂಡ್ ನಲ್ಲಿ ಕಂ ಬ್ಯಾಕ್ ಮಾಡಲು ನೋಡುತ್ತಿದ್ದಾರೆ. ಮತ್ತೊಂದು ಪಂದ್ಯದಲ್ಲಿ ಯುಪಿ ಯೋದಾಸ್ ಮತ್ತು ಪಟ್ನಾ ಪೈರೇಟ್ಸ್ ಸೆಣಸಾಡಲಿವೆ.