![](https://kannadadunia.com/wp-content/uploads/2024/02/nasir.png)
ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಸಂಬಂಧ ಎಫ್ಎಸ್ಎಲ್ ವರದಿ ಬಹಿರಂಗವಾಗಿದ್ದು, ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ನಿಜ ಎನ್ನಲಾಗಿದೆ.
ವಿಧಾನಸೌಧದಲ್ಲಿ ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಎಫ್ ಎಸ್ ಎಲ್ ನಲ್ಲಿ ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ಹೇಳಲಾಗುತ್ತಿದೆ.
ಎಫ್ಎಸ್ಎಲ್ ವರದಿ ಬೆನ್ನಲ್ಲೇ ವಿಧಾನಸೌಧದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ವಶಕ್ಕೆ ಪಡೆದಿದ್ದ ಅನುಮಾನಿತ ವ್ಯಕ್ತಿಗಳ ವಾಯ್ಸ್ ರವಾನೆ ಮಾಡಲಾಗಿದೆ. ಎಫ್ಎಸ್ಎಲ್ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ ಅಧಿಕೃತವಾಗಿ ಆರೋಪಿಯನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.