alex Certify ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಗುಡ್ ನ್ಯೂಸ್: ಎಲ್ಲ ವಿವಿಗಳಲ್ಲಿ ಏಕರೂಪದ ವೇಳಾಪಟ್ಟಿ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಗುಡ್ ನ್ಯೂಸ್: ಎಲ್ಲ ವಿವಿಗಳಲ್ಲಿ ಏಕರೂಪದ ವೇಳಾಪಟ್ಟಿ ಜಾರಿ

ಧಾರವಾಡ: ರಾಜ್ಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸರ್ಕಾರ ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಹೇಳಿದರು.

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಗಾಂಧಿಭವನದಲ್ಲಿ ಆಯೋಜಿಸಲಾದ 74ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿವಿಧ ಕೈಗಾರಿಕೆಗಳ ನಿರೀಕ್ಷೆಗೆ ತಕ್ಕಂತೆ ವಿದ್ಯಾರ್ಥಿಗಳಿಗೆ ಕೌಶಲ್ಯಗಳನ್ನು ಕಲಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬಿ.ಕಾಂ. ಪದವಿಯಲ್ಲಿ ಹೊಸ ನಾಲ್ಕು ವಿಭಾಗಗಳನ್ನು ತೆರೆಯಲಾಗಿದ್ದು, ಈಗಾಗಲೇ 1400 ವಿದ್ಯಾರ್ಥಿಗಳಿಗೆ ಪ್ರಶಿಕ್ಷಣಾರ್ಥಿ ಶಿಷ್ಯವೇತನ ನೀಡಲು ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಡಿಜಿಟಲ್ ಲೈಬ್ರರಿ ಆರಂಭಿಸಬೇಕು, ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ವೇಳಾಪಟ್ಟಿ ತರಲಾಗುತ್ತಿದೆ. ನಿರ್ದಿಷ್ಟ ಸಮಯಕ್ಕೆ ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಿಸಲಾಗುವುದು. ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸುತ್ತಿದ್ದೇವೆ. ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ಸವಾಲುಗಳನ್ನು ಎದುರಿಸಿ ಉನ್ನತ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕೆಂದು ಅವರು ತಿಳಿಸಿದರು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಚೇರ್ಮನ್ ಪ್ರೊ. ಎಸ್.ಅಯ್ಯಪ್ಪನ್ ಅವರು ಮಾತನಾಡಿ, ಕಾಯಕವೇ ಕೈಲಾಸ ತತ್ವ ಪಾಲನೆಯ ಮೂಲಕ ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತವಾದುದನ್ನು ಸಾಧಿಸಬೇಕು ಎಂದು ಹೇಳಿದರು.

ಕುಲಪತಿ ಕೆ. ಬಿ. ಗುಡಸಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಕೆ.ಚನ್ನಪ್ಪ ಅವರು ಸುವರ್ಣ ಪದಕಗಳನ್ನು ಪಡೆದಿರುವ ವಿದ್ಯಾರ್ಥಿಗಳ ವಿವರವನ್ನು ನೀಡಿದರು. ಮೌಲ್ಯಮಾಪನ ಕುಲ ಸಚಿವ ನಿಜಲಿಂಗಪ್ಪ ಮಟ್ಟಿಹಾಳ ಅವರು ಪಿಹೆಚ್.ಡಿ.ಪದವಿ, ರ್ಯಾಂಕ್, ಶಿಷ್ಯವೇತನ ಮತ್ತು ನಗದು ಪಾರಿತೋಷಕ ಪ್ರಶಸ್ತಿ ಪ್ರಮಾಣವನ್ನು ಪಡೆದ ವಿದ್ಯಾರ್ಥಿಗಳ ವಿವರವನ್ನು ನೀಡಿದರು

ಕಾರ್ಯಕ್ರಮದಲ್ಲಿ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಕರ್ನಾಟಕ ವಿಶ್ವವಿದ್ಯಾಲಯದ 74 ನೆ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮರೇಗುದ್ದಿಯ ನಿರುಪಾಧೀಶ ಮಹಾಸ್ವಾಮಿ, ಡಾ. ವೆಂಕಟ ಸತ್ಯ ವರ ಪ್ರಸಾದ ಚಿಗುರುಪಾಟಿ ಹಾಗೂ ಎಸ್.ಎನ್. ವೆಂಕಟಲಕ್ಷ್ಮೀ ನರಸಿಂಹರಾಜು ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ನೀಡಲಾಯಿತು.

ಕರ್ನಾಟಕ ವಿಶ್ವವಿದ್ಯಾಲಯದ 74 ನೆ ವಾರ್ಷಿಕ ಘಟಿಕೋತ್ಸವದಲ್ಲಿ ಅತೀ ಹೆಚ್ಚು ಪದಕ ಪಡೆದವರ ವಿವರ:

ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿ ಜಯಶ್ರೀ ತಳವಾರ ಅವರಿಗೆ 9 ಪದಕಗಳು ಮತ್ತು ಎರಡು ನಗದು ಪ್ರಶಸ್ತಿ

ಕನ್ನಡ ಅಧ್ಯಯನ ವಿಭಾಗದ ವಿಧ್ಯಾರ್ಥಿನಿ ಸಂಗೀತಾ ರಾ ಲಕ್ಕಪ್ಪಣ್ಣನವರ ಅವರಿಗೆ 9 ಪದಕ ಮತ್ತು ಎರಡು ನಗದು ಪ್ರಶಸ್ತಿ ಪಡೆದಿದ್ದಾರೆ.

ಜೀವರಸಾಯನ ಶಾಸ್ತ್ರ ವಿಭಾಗದ ವಿಧ್ಯಾರ್ಥಿನಿ ಹರ್ಷಿತಾ ಡಿ. ಅವರಿಗೆ 8 ಪದಕಗಳು ಪಡೆದುಕೊಂಡರು. ಪ್ರಾಣಿಶಾಸ್ತ್ರ ವಿಭಾಗದ ವಿಧ್ಯಾರ್ಥಿನಿ ವಿಸ್ಮಯ ಸಿ.ಅಂಗಡಿ ಅವರಿಗೆ 8 ಪದಕಗಳು ಮತ್ತು ಎರಡು ನಗದು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಲೈಬ್ರೆರಿ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ರಚನಾ ಶಿವಳ್ಳಿ ಅವರಿಗೆ 8 ಪದಕಗಳು ಮತ್ತು ಒಂದು ನಗದು ಪ್ರಶಸ್ತಿಯನ್ನು ಪಡೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...