ಬೆಂಗಳೂರು: ಬಿಬಿಎಂಪಿಯಲ್ಲಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಕೆಲವೊಂದು ಪ್ರಕ್ರಿಯೆಗಳಿಗೆ ಆಡಳಿತ ವಿಭಾಗದ ವಿಶೇಷ ಆಯುಕ್ತರು ವಿವರಣೆ ಕೇಳಿದ್ದರು. ಮಾಹಿತಿ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಪೌರಕಾರ್ಮಿಕರಿಗೆ ಸಮವಸ್ತ್ರ ಸೇರಿದಂತೆ ಸುರಕ್ಷತಾ ಉಪಕರಣಗಳನ್ನು ವಿತರಿಸಲಾಗುತ್ತಿದೆ ಸೇವೆ ಕಾಯಂ ಆಗದ ಪೌರಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಒಂದಿಷ್ಟು ಸಮಸ್ಯೆಯಾಗಿದ್ದು ಅವುಗಳನ್ನು ಕೂಡಲೇ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.