ಮಂಗಳೂರು: ರಾಷ್ಟ್ರಪ್ರಶಸ್ತಿ ಸಿನಿಮಾ ನಿರ್ಮಾಪಕರಿಬ್ಬರ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ‘ವೀರಕಂಬಳ’ ಸಿನಿಮಾ ನಿರ್ಮಾಪಕನ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.
ನಿರ್ಮಾಪಕ ಅರುಣ್ ಪೈ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಂಟ್ವಾಳ ಮೂಲದ ಉದ್ಯಮಿಯೊಬ್ಬರು ದೂರು ನೀಡಿರುವ ಹಿನ್ನೆಲೆಯಲ್ಲಿ ಅರುಣ್ ಪೈ ವಿರುದ್ಧ ಪ್ರಕರಣ ದಾಖಲಾಗಿದೆ.