ಬೆಂಗಳೂರು : ರಾಸಾಯನಿಕ ಪಟಾಕಿ ತಯಾರಿಸುವ ಮೊದಲೇ ನಿಷೇಧ ಜಾರಿಯಾಗಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಹಸಿರು ಪಟಾಕಿ ಹೊರತಾಗಿ ಹೆಚ್ಚು ಮಾಲಿನ್ಯಕಾರಕ ಸಾಮಾನ್ಯ ಪಟಾಕಿ ಮಾರಾಟ, ದಾಸ್ತಾನು ಮಾರಾಟ ಮಾಡದಂತೆ ಪಟಾಕಿ ಮಾರಾಟಗಾರರಿಗೆ ನೋಟಿಸ್ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಆಟದ ಮೈದಾನಗಳಲ್ಲಿ ಪಟಾಕಿ ಮಳಿಗೆ ತೆರೆಯಲು ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆಯುವ ಪಟಾಕಿ ಮಾರಾಟಗಾರರ ವಿಳಾಸ ಪಡೆದು, ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ನಿರ್ದೇಶನ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.