ಮೈಸೂರು : ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆಗೆ ಸಮಿತಿ ಕರೆ ನೀಡಿರುವ ಹಿನ್ನೆಲೆ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ನಿಷೇಧಾಜ್ಞೆ ಜಾರಿಗೊಳಿಸಿ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ದಿನಾಂಕ 28.09.2024ರಂದು ಮಧ್ಯರಾತ್ರಿ 12 ಗಂಟೆಯಿಂದ 30.09.2024ರ ಬೆಳಿಗ್ಗೆ 6 ಗಂಟೆಯವರೆಗೆ ಕಲಂ 163 ಬಿ.ಎನ್.ಎಸ್.ಎಸ್ ಅಡಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.ಸಭೆ ಸಮಾರಂಭ, ರ್ಯಾಲಿ ಹಾಗೂ ಮೆರವಣಿಗೆಗೆ ನಿಷೇಧ ವಿಧಿಸಲಾಗಿದ್ದು, ಟೌನ್ ಹಾಲ್ ಒಳ ಆವರಣ ಹೊರತುಪಡಿಸಿ ಉಳಿದೆಡೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವಾಗಲೇ ಮಹಿಷ ದಸರಾ ಆಚರಣೆ ನಡೆಸಲು ಮಹಿಷ ದಸರಾ ಸಮಿತಿ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಾಳೆ ಸೆ. 29ರಂದು ಮಹಿಷ ದಸರಾ ಆಚರಣೆ ನಡೆಸಲು ಸಮಿತಿ ನಿರ್ಧರಿಸಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನಿಗೆ ಪುಷ್ಪಾರ್ಚನೆ ಮಾಡಿ ಬಳಿಕ ಪುಅರಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾದರೆ ಚಾಮುಂಡಿ ಚಲೋ ಹೋರಾಟ ನಡೆಸುವುದಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.