ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೆ ಯಾವುದೇ ಪರೀಕ್ಷೆ ಇಲ್ಲದೆ ಬಡ್ತಿ ನೀಡಲು ನಿರ್ಧರಿಸಿದೆ. ಬಡ್ತಿ ಪ್ರಮಾಣವನ್ನು ಶೇಕಡ 40ಕ್ಕೆ ಹೆಚ್ಚಳ ಮಾಡಲಾಗಿದೆ.
ಮುಂದಿನ ಬಾರಿ ಆರರಿಂದ ಎಂಟನೇ ತರಗತಿ ಶಿಕ್ಷಕರ ನೇಮಕಾತಿ ವೇಳೆ ಶೇಕಡ 60 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಿದ್ದು, ಶೇಕಡ 40ರಷ್ಟು ಹುದ್ದೆಗಳಿಗೆ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಪದವೀಧರ ಶಿಕ್ಷಕರಿಗೆ ಯಾವುದೇ ಪರೀಕ್ಷೆ ಇಲ್ಲದೆ ಬಡ್ತಿ ನೀಡಲಾಗುವುದು. ಶಿಕ್ಷಣ ಇಲಾಖೆಯ ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ನೀಡಲಾಗಿದೆ.
ಈ ಮೂಲಕ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ರಾಜ್ಯದಲ್ಲಿ 1.53 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರಿದ್ದು, ಇವರಲ್ಲಿ 85,000 ಶಿಕ್ಷಕರು ಪದವೀಧರ ಶಿಕ್ಷಕರಾಗಿದ್ದಾರೆ. ನೇಮಕಾತಿ ಸಂದರ್ಭದಲ್ಲಿ ಬಡ್ತಿ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದ್ದು, ಶಿಕ್ಷಣ ಇಲಾಖೆ ಪರೀಕ್ಷೆ ಇಲ್ಲದೆ ಬಡ್ತಿಗೆ ಅವಕಾಶ ನೀಡಿದೆ.