ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು, ಅಕ್ಟೋಬರ್ 7 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ.
ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿಯನ್ನು ಪಡೆದು ನೋಂದಾಯಿಸಬೇಕಾದ ವ್ಯವಸ್ಥೆಯನ್ನು ಅ.7 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿರುತ್ತದೆ.
ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ, ಖಾತಾ ತಂತ್ರಾಂಶ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
ಇ-ಖಾತಾ ಸಂಯೋಜನೆ ಪ್ರಯೋಜನಗಳು:
ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೊಸಹೋಗುವುದನ್ನು ತಡೆಯುವುದು. ಮತ್ತು ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.
ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ಆಗುವುದನ್ನು ತಪ್ಪಿಸಬಹುದಾಗಿದೆ. ಹಾಗೂ ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶವನ್ನು ಈ ತಂತ್ರಾಂಶ ಹೊಂದಿದೆ.
ಈ ಹಿನ್ನೆಲೆಯಲ್ಲಿ ಅ.7 ರಿಂದ ನಗರ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿಯನ್ನು ಪಡೆದು ನೋಂದಾಯಿಸಲಾಗುತ್ತದೆ ಎಂದು ಹಿರಿಯ ಉಪನೋಂದಣಾಧಿಕಾರಿಗಳು ತಿಳಿಸಿದ್ದಾರೆ.