alex Certify BREAKING : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಹೈಕೋರ್ಟ್ ನಿಂದ ಸಚಿವ ಜಮೀರ್ ಅರ್ಜಿ ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಹೈಕೋರ್ಟ್ ನಿಂದ ಸಚಿವ ಜಮೀರ್ ಅರ್ಜಿ ವಜಾ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹಮದ್ ಗೆ ಹಿನ್ನಡೆಯಾಗಿದ್ದು, ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣದ ರದ್ದು ಕೋರಿ ಸಚಿವ ಜಮೀರ್ ಅಹಮದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ವಜಾಗೊಳಿಸಿ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ. 80.44 ಕೋಟಿ ಆದಾಯ ಮೀರಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಮೀರ್ ವಿರುದ್ಧ ಎಸಿಬಿ ಕೇಸ್ ದಾಖಲಿಸಿತ್ತು. 80.44 ಕೋಟಿ ರೂ. ಮೌಲ್ಯದ ಆದಾಯ ಮೀರಿ ಅಕ್ರಮ ಆಸ್ತಿ ಮಾಡಿದ ಆರೋಪ ಜಮೀರ್ ಅಹ್ಮದ್ ಮೇಲಿದೆ. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ACB) ಪ್ರಕರಣ ದಾಖಲಿಸಿತ್ತು. ಪ್ರಕರಣ ರದ್ದುಗೊಳಿಸುವಂತೆ ಜಮೀರ್ ಅಹ್ಮದ್ ಅರ್ಜಿ ಸಲ್ಲಿಸಿದ್ದರು.

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇ ತಿಂಗಳಲ್ಲಿ ಎಫ್ಐಆರ್ ದಾಖಲಿಸಿತ್ತು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...