
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ಅವರು ಸಿಬಿಐ ತನಿಖೆಗೆ ತಡೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠಕ್ಕೆ ಏಕ ಸದಸ್ಯ ಪೀಠ ವಜಾಗೊಳಿಸಿತ್ತು. ಈ ಸಂಬಂಧ ಹೈಕೋರ್ಟ್ ಮತ್ತೊಂದು ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕೇಂದೀಯ ತನಿಖಾ ದಳ-ಸಿಬಿಐ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಆದರೆ ಇದು ಕಾನೂನು ಬಾಹಿರವಾಗಿದೆ ಎಂದು ಡಿಕೆ ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು.