ಬೆಂಗಳೂರು: ರಾಜ್ಯಾದ್ಯಂತ ಆಸ್ತಿ ನೋಂದಣಿ ಮಾರ್ಗಸೂಚಿ ದರವನ್ನು ಶೇಕಡ 10 ರಷ್ಟು ಕಡಿತಗೊಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮಾರ್ಗಸೂಚಿ ದರಗಳನ್ನು ಮುಂದಿನ ಮೂರು ತಿಂಗಳ ಕಾಲ ಶೇಕಡ 10 ರಷ್ಟು ಕಡಿತಗೊಳಿಸಿದೆ.
ಆಸ್ತಿ ನೋಂದಣಿಗೆ ಗ್ರಾಹಕರನ್ನು ಆಕರ್ಷಿಸುವ ಮೂಲಕ ವಾಣಿಜ್ಯ ಚಟುವಟಿಕೆಗೆ ಉತ್ತೇಜನ ನೀಡಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಮತ್ತು ತಾಲೂಕು ಉಪ ನೋಂದಣಿ ಅಧಿಕಾರಿಗಳಿಗೆ ಮಾರ್ಗಸೂಚಿ ದರಗಳ ಶೇಕಡ 90 ರಷ್ಟು ಮಾತ್ರ ಪರಿಗಣಿಸಲು ಆದೇಶ ಹೊರಡಿಸಲಾಗಿದೆ.