ಬೆಂಗಳೂರು: ಅಕ್ಟೋಬರ್ 1ರಿಂದ ಆಸ್ತಿ ನೋಂದಣಿ ಮಾರ್ಗಸೂಚಿ ದರ ಪರಿಷ್ಕರಣೆಯಾಗಲಿದ್ದು, ಸರಾಸರಿ ಶೇಕಡ 25 ರಿಂದ 30ರಷ್ಟು ಹೆಚ್ಚಳ ಆಗಲಿದೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಆಸ್ತಿ ಮಾರ್ಗಸೂಚಿ ದರ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ಸುಮಾರು 2000 ಕೋಟಿ ರೂ. ಹೆಚ್ಚುವರಿ ಆದಾಯ ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.
ಪ್ರತಿವರ್ಷ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಬೇಕಿದೆ. ಆದರೆ, ಕಳೆದ 5 ವರ್ಷಗಳಿಂದ ಮಾರ್ಗಸೂಚಿ ದರ ಪರಿಷ್ಕರಣೆಯಾಗಿಲ್ಲ. ಇದರಿಂದಾಗಿ ಹಲವು ಕಡೆ ಭೂಮಿ ಮಾರಾಟಗಾರರು, ರೈತರಿಗೆ ಅನ್ಯಾಯವಾಗಿದ್ದು, ಕಪ್ಪು ಹಣ ವಹಿವಾಟಿಗೂ ಅವಕಾಶ ನೀಡಿದಂತಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ದರ ಅಕ್ಟೋಬರ್ 1ರಿಂದ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.