ಬೆಂಗಳೂರು: ಸ್ಥಿರಾಸ್ತಿ ಮಾರ್ಗಸೂಚಿ ದರ ಸೆಪ್ಟೆಂಬರ್ ನಿಂದ ಪರಿಷ್ಕರಣೆ ಆಗಲಿದ್ದು, ಭೂಮಿಯ ಮೌಲ್ಯ ಶೇಕಡ 20ರವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ,
ನಾಲ್ಕು ವರ್ಷಗಳ ನಂತರ ಮಾರ್ಗಸೂಚಿ ದರ ಪರಿಷ್ಕರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳೊಂದಿಗೆ ಈ ಬಗ್ಗೆ ಸಭೆ ನಡೆಸಿದ್ದಾರೆ.
ಸ್ವತ್ತುಗಳ ಭೌತಿಕ ಬದಲಾವಣೆ ಆಧರಿಸಿ ಮಾರುಕಟ್ಟೆ ದರಗಳಲ್ಲಿ ವ್ಯತ್ಯಾಸವಾಗುವ ಹಿನ್ನೆಲೆಯಲ್ಲಿ ಪ್ರತಿವರ್ಷ ಭೂಮಿ ಮೌಲ್ಯ ಪರಿಷ್ಕರಿಸಬೇಕು. 2018-19 ನೇ ಸಾಲಿನಲ್ಲಿ ಸ್ಥಿರಾಸ್ತಿ ಮಾರ್ಗಸೂಚಿ ದರವನ್ನು ಶೇಕಡ 5.25 ರಷ್ಟು ಹೆಚ್ಚಳ ಮಾಡಲಾಗಿತ್ತು.
ನಂತರ ಕೊರೋನಾ ಕಾರಣದಿಂದ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿಲ್ಲ. ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ಮಾರ್ಗಸೂಚಿ ದರ ಪರಿಷ್ಕರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.