ಬೆಂಗಳೂರು: ಮನೆ, ಸೈಟ್, ಜಮೀನು ಖರೀದಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನೀವು ಆಸ್ತಿ ಖರೀದಿಸುವ ಉದ್ದೇಶ ಹೊಂದಿದ್ದರೆ ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳುವುದು ಒಳ್ಳೆಯದು. ಶೀಘ್ರವೇ ಭೂಮಿಯ ಮಾರ್ಗಸೂಚಿ ದರ ಹೆಚ್ಚಳವಾಗುತ್ತದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆ ವತಿಯಿಂದ ಮಾರ್ಗಸೂಚಿ ದರ ಹೆಚ್ಚಳಕ್ಕೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿವರ್ಷ ಮಾರ್ಗಸೂಚಿ ದರ ಹೆಚ್ಚಳ ಮಾಡಲಾಗುತ್ತದೆ. ಆದರೆ, ಕೊರೋನಾ ಕಾರಣದಿಂದಾಗಿ 2019 ರಿಂದ ಮಾರ್ಗಸೂಚಿ ದರ ಹೆಚ್ಚಳ ಮಾಡಿಲ್ಲ. ಕಳೆದ ಎರಡು ವರ್ಷ ಶೇಕಡ 10 ರಷ್ಟು ಮಾರ್ಗಸೂಚಿ ದರ ಇಳಿಕೆ ಮಾಡಲಾಗಿತ್ತು.
ಈ ಬಾರಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮಾರ್ಗಸೂಚಿ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದ್ದು, ಶೇಕಡ 20 ರಿಂದ 40 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮಾರ್ಗಸೂಚಿ ದರ ಹೆಚ್ಚಳವಾದಲ್ಲಿ ಸಹಜವಾಗಿ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಹೆಚ್ಚಳವಾಗಲಿವೆ. ಆಸ್ತಿ ಖರೀದಿ ಬೆಲೆ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.