ಬೆಂಗಳೂರು: ಸರ್ವರ್ ಸಮಸ್ಯೆಯಿಂದಾಗಿ ಆಸ್ತಿ ನೋಂದಣಿ ಪ್ರಕ್ರಿಯೆಗೆ ಭಾರಿ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಆಸ್ತಿ ನೋಂದಣಿ ಮಾಡಿಸುವವರು ತೊಂದರೆ ಅನುಭವಿಸುವಂತಾಗಿದೆ.
ಸರ್ವರ್ ಸಮಸ್ಯೆ, ನೋಂದಣಿಗೆ ಬೇಕಾದ ಒಟಿಪಿ ಸಂಖ್ಯೆ ಎಸ್ಎಂಎಸ್ ಬಾರದೆ ನೋಂದಣಿ ಕಾರ್ಯ ಸ್ಥಗಿತವಾಗಿ ಬೆಂಗಳೂರಿನ 43 ಸಬ್ ರಿಜಿಸ್ಟ್ರಾರ್ ಕಚೇರಿ ಸೇರಿದಂತೆ ರಾಜ್ಯದ 282 ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಸಮಸ್ಯೆ ಎದುರಾಗಿದೆ.
ಹುಬ್ಬಳ್ಳಿ-ಧಾರವಾಡ, ಮಂಗಳೂರು, ಕಲಬುರ್ಗಿ, ಮೈಸೂರು, ದಾವಣಗೆರೆ ಸೇರಿದಂತೆ ರಾಜ್ಯದ ಬಹುತೇಕ ಭಾಗದಲ್ಲಿ ಆಸ್ತಿ ನೋಂದಣಿಗೆ ತಾಂತ್ರಿಕ ಸಮಸ್ಯೆ ಎದುರಾಗಿದೆ. ಸರ್ವರ್ ಅಲ್ಲ, ಆಸ್ತಿ ನೋಂದಣಿ ಮಾಡಿಸುವವರ ಮೊಬೈಲ್ ಗೆ ಒಟಿಪಿ ಕಳಿಸಲಿದ್ದು, ಎರಡು ದಿನ ಒಟಿಪಿ ಬಾರದೇ ತೊಂದರೆಯಾಗಿದೆ. ತಾಂತ್ರಿಕ ಸಮಸ್ಯೆಯಿಂದ ಹೀಗಾಗಿದ್ದು ಎಲ್ಲವೂ ಸರಿಯಾಗಿದೆ ಎಂದು ಹೇಳಲಾಗಿದೆ.