ಬೆಂಗಳೂರು: ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ, ಫ್ಲಾಟ್, ಅಪಾರ್ಟ್ಮೆಂಟ್ ಗಳ ಮಾರ್ಗಸೂಚಿ ದರವನ್ನು ಜನವರಿ 1 ರಿಂದ 31 ರವರೆಗೆ ಅನ್ವಯವಾಗುವಂತೆ ಶೇಕಡ 10 ರಷ್ಟು ಕಡಿಮೆ ಮಾಡಲಾಗಿದೆ. ಇದನ್ನು ಮೂರು ತಿಂಗಳು ವಿಸ್ತರಿಸುವ ಸರ್ಕಾರ ಚಿಂತನೆ ನಡೆಸಿದೆ.
ಕಂದಾಯ ಸಚಿವ ಆರ್. ಅಶೋಕ್, ಈ ಬಗ್ಗೆ ಮಾಹಿತಿ ನೀಡಿದ್ದು, ರಿಯಲ್ ಎಸ್ಟೇಟ್ ಉದ್ಯಮ ಪ್ರೋತ್ಸಾಹಿಸಲು ಜನವರಿಯಿಂದ ಮಾರ್ಚ್ 31ರವರೆಗೆ ಸ್ಥಿರಾಸ್ತಿಗಳ ಮೇಲಿನ ಮಾರ್ಗಸೂಚಿ ದರವನ್ನು ಶೇಕಡ 10 ರಷ್ಟು ಕಡಿಮೆ ಮಾಡಿರುವುದನ್ನು ಇನ್ನು ಮೂರು ತಿಂಗಳು ವಿಸ್ತರಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸ್ಥಿರಾಸ್ತಿ ಮಾರ್ಗಸೂಚಿ ದರ ವಿನಾಯಿತಿಯನ್ನು ಮೂರು ತಿಂಗಳು ವಿಸ್ತರಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.