ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದವರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದೆ. ಆಸ್ತಿ ತೆರಿಗೆ ಕಟ್ಟದವರ ಕಟ್ಟಡಗಳನ್ನು ಸೀಜ್ ಮಾಡುವ ಮೂಲಕ ಅಧಿಕಾರಿಗಳು ಕಾರ್ಯಾಚಾರಣೆ ನಡೆಸಿದ್ದಾರೆ.
ಆಸ್ತಿ ತೆರಿಗೆ ಪಾವತಿ ಮಾಡದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ನವೆಂಬರ್ ನಲ್ಲೇ ಮುಂದಾಗಿತ್ತು. ಕೆಲ ದಿನಗಳ ಹಿಂದೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದವರ ಕಾರು, ಬೈಕ್, ವಾಹನಗಳನ್ನು ಸೀಜ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳು ಇದೀಗ ಮತ್ತೊಂದು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ನೋಟಿಸ್ ನೀಡಿದರೂ ಆಸ್ತಿ ತೆರಿಗೆ ಕಟ್ಟದವರ ಕಟ್ಟಡಗಳನ್ನು ಸೀಜ್ ಮಾಡಲಾಗುತ್ತಿದೆ. ವರ್ತೂರು, ವೈಟ್ ಫೀಲ್ಡ್ ಸೇರಿದಂತೆ ಬೆಂಗಳೂರಿನ ವಿವಿಧೆಡೆ ಪಾಲಿಕೆ ಅಧಿಕಾರಿಗಳು ಈಗಾಗಲೇ ಹಲವು ಕಟ್ಟಡಗಳನ್ನು ಸೀಜ್ ಮಾಡಿ ಕ್ರಮ ಕೈಗೊಂಡಿದ್ದಾರೆ.
ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಅಧಿಕಾರಿಯಾಗಿ ಮನೀಶ್ ಮೌದ್ಗಿಲ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ತೆರಿಗೆ ವಂಚಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಇಂತಹ ಮಹತ್ವದ ಕ್ರಮಕೈಗೊಂಡಿದೆ.