ಬೆಂಗಳೂರು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಶೇಕಡ 5ರಷ್ಟು ರಿಯಾಯಿತಿ ಸೌಲಭ್ಯವನ್ನು ಜುಲೈ 31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸರ್ಕಾರಕ್ಕೆ ಸಲ್ಲಿಸಿದ ಮನವಿ ಮೇರೆಗೆ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಬುಧವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿನ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಅಸ್ತಿ ತೆರಿಗೆ ಪಾವತಿಗೆ ನೀಡುತ್ತಿರುವ ಶೇಕಡ 5ರಷ್ಟು ರಿಯಾಯಿತಿ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.