ನವದೆಹಲಿ: ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಮತ್ತು ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ಅವರು ಪ್ರವಾದಿ ಮೊಹಮ್ಮದರ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಶುಕ್ರವಾರದ ಪ್ರಾರ್ಥನೆಯ ನಂತರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ರಾಂಚಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ರಾಂಚಿಯಲ್ಲಿ ನಡೆದ ಹಿಂಸಾಚಾರದ ನಂತರ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಗೆ(RIMS) ಕರೆತರಲಾದ ಗಾಯಾಳುಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶುಕ್ರವಾರದ ಪ್ರಾರ್ಥನೆಯ ನಂತರ ಪ್ರಾರಂಭವಾದ ಪ್ರತಿಭಟನೆಯು ಹಿಂಸಾತ್ಮಕವಾಗಿ ಮಾರ್ಪಟ್ಟಿತು, ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚುವುದು ಸೇರಿ ವಿಧ್ವಂಸಕ ಕೃತ್ಯವೆಸಗಿದ್ದು, ಅಪಾರ ಹಾನಿಯಾಗಿದೆ. ಜಿಲ್ಲಾಡಳಿತ ತ್ವರಿತ ಕ್ರಮ ಕೈಗೊಂಡಿದೆ. ರಾಂಚಿಯ ಅತ್ಯಂತ ಹಿಂಸಾತ್ಮಕ ವಿಭಾಗಗಳಲ್ಲಿ ಕರ್ಫ್ಯೂ ಜಾರಿಗೊಳಿಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ. ಸ್ವಲ್ಪ ಉದ್ವಿಗ್ನತೆ ಹೊರತಾಗಿಯೂ ಪರಿಸ್ಥಿತಿ ನಿಯಂತ್ರಣದಲ್ಲಿದೆ ರಾಂಚಿ ಪೊಲೀಸ್ ಉಪ ಇನ್ಸ್ ಪೆಕ್ಟರ್ ಜನರಲ್(ಡಿಐಜಿ) ಅನೀಶ್ ಗುಪ್ತಾ ಎಂದು ಹೇಳಿದ್ದಾರೆ.