ಕಲಬುರಗಿ : ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳ ನೇಮಕ ಪ್ರಸ್ತಾಪ ನಮ್ಮ ಮುಂದೆ ಇಲ್ಲ , ಇದು ಊಹಾಪೋಹ ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ‘ರಾಜ್ಯದಲ್ಲಿ ಮೂವರು ಮುಖ್ಯಮಂತ್ರಿಗಳ ನೇಮಕ ಪ್ರಸ್ತಾಪ ನಮ್ಮ ಮುಂದೆ ಬಂದಿಲ್ಲ, ಇದು ಊಹಾಪೋಹ ಅಷ್ಟೇ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಇತ್ತೀಚೆಗೆ ಹೇಳಿದ್ದರು. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದಿಂದ ಇಂತಹ ಚರ್ಚೆಗಳು ಬರಬಾರದು’ ಎಂದರು.
ನಾಳೆ ದೆಹಲಿಯಲ್ಲಿ ಮಹತ್ವದ ಸಭೆ ಕರೆದಿದ್ದೇವೆ, ಅಭ್ಯರ್ಥಿಗಳ ಆಯ್ಕೆ ಕುರಿತು ನಾಳೆ ಚರ್ಚೆ ಮಾಡಲಿದ್ದೇವೆ, ಈಗಾಗಲೇ ಲೋಕಸಭೆ ಚುನಾವಣೆಗೆ ವೀಕ್ಷಕರನ್ನು ನೇಮಕ ಮಾಡಿದ್ದೇವೆ ಎಂದು ಮಲ್ಲಿಕಾರ್ಜನ ಖರ್ಗೆ ಹೇಳಿದ್ದಾರೆ.