
ನವದೆಹಲಿ: ಒಬಿಸಿ ಮೀಸಲು ಆದಾಯ ಮಾನದಂಡದ ಮರುಪರಿಶೀಲನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಲೋಕಸಭೆಗೆ ಸಮಾಜ ಕಲ್ಯಾಣ ಖಾತೆ ರಾಜ್ಯ ಸಚಿವ ಕೃಷ್ಣಪಾಲ್ ಸಿಂಗ್ ಗುರ್ಜರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಇತರೆ ಹಿಂದುಳಿದ ವರ್ಗಗಳ ಒಬಿಸಿ ಮೀಸಲಿನ ಕೆನೆಪದರ ಆದಾಯ ಮಾನದಂಡವನ್ನು ಮರುಪರಿಶೀಲಿಸುವ ಪ್ರಸ್ತಾಪ ಸರ್ಕಾರದ ಮುಂದಿದೆ ಎಂದು ತಿಳಿಸಿದ್ದಾರೆ. ಲೋಕಸಭೆಗೆ ಲಿಖಿತ ಉತ್ತರ ನೀಡಿದ ಸಚಿವರು, ರಾಷ್ಟ್ರೀಯ ಹಿಂದುಳಿದ ವರ್ಗದ ಆಯೋಗದೊಂದಿಗೆ ಸುದೀರ್ಘ ಸಮಾಲೋಚನೆಯ ನಂತರ ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಸರ್ಕಾರ ಪರಿಶೀಲನೆ ನಡೆಸಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಇತರ ಕೆಲವು ವರ್ಗಗಳ ಹುದ್ದೆಗಳು ಭರ್ತಿಯಾಗದೆ ಇರುವ ಬಗ್ಗೆ ಸಮಿತಿ ರಚಿಸಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.