ಬೆಂಗಳೂರು : ಕೇಂದ್ರ ಸರ್ಕಾರದ ಅಣತಿಯಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.
ಮೂಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವಿಲ್ಲ, ಅವರು ಯಾರಿಗಾದರೂ ನಿರ್ದೇಶನ ನೀಡಿದ, ಆದೇಶ ಮಾಡಿದ ಯಾವುದೇ ದಾಖಲೆಗಳೂ ಇಲ್ಲ. ಆದರೂ ಉದ್ದೇಶ ಪೂರ್ವಕವಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಪ್ರಕರಣದಲ್ಲಿ ಸೇರಿಸಲಾಗಿದೆ. ಕೇಂದ್ರ ಸರ್ಕಾರದ ಅಣತಿಯಂತೆ ರಾಜಪಾಲರು ರಾಜಕೀಯ ದುರುದ್ದೇಶದಿಂದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದ್ದು. ಬಿಜೆಪಿ ಸರ್ಕಾರ, ಬಿಜೆಪಿ ಅಧ್ಯಕ್ಷರಿದ್ದಾಗಲೇ ಮುಡಾ ಸಿದ್ದರಾಮಯ್ಯ ಅವರ ಪತ್ನಿಯವರಿಗೆ ಪರಿಹಾರವಾಗಿ ನಿವೇಶನ ನೀಡಿದ್ದು. ಈಗ ಅದನ್ನೇ ಭ್ರಷ್ಟಾಚಾರ ಎನ್ನುತ್ತಿದ್ದಾರೆ. ಇದರ ಹಿಂದೆ ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ, ಪ್ರಭಾವ, ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಇರುವುದು ಸ್ಪಷ್ಟವಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.