
ಶಿವಮೊಗ್ಗ: ಶಿವಮೊಗ್ಗದ ವಿನೋಬನಗರದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಓರ್ವನನ್ನು ಬಂಧಿಸಲಾಗಿದ್ದು, ಮಹಿಳೆಯೊಬ್ಬರನ್ನು ರಕ್ಷಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಹೊಸಮನೆ ಬಡಾವಣೆಯ ಶೇಖರ ಮೂರ್ತಿ(45) ಎಂಬುವನನ್ನು ಪೊಲೀಸರು ವಶಕ್ಕೆ ಪಡೆದು ಅನೈತಿಕ ವ್ಯವಹಾರ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಎಸ್.ಪಿ. ಮಿಥುನ್ ಕುಮಾರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿನೋಬನಗರ ಠಾಣೆ ಪೊಲೀಸರು ದಾಳಿ ಮಾಡಿದ್ದು, ದಾಳಿಯ ವೇಳೆ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ.