ಬೆಂಗಳೂರಿನ ರಾಮಮೂರ್ತಿ ನಗರದ ಸಮೀಪ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಉಗಾಂಡಾ ದೇಶದ ಮಹಿಳೆ ಹಾಗೂ ಆಕೆಯ ಸ್ನೇಹಿತ ರಾಮಮೂರ್ತಿ ನಗರದ ಫೈಸಲ್ ಅಹಮದ್ ಬಂಧಿತ ಆರೋಪಿಗಳು. ರಾಮಮೂರ್ತಿ ನಗರ ಸಮೀಪದ ಮನೆಯಲ್ಲಿ ಇವರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ವಿದೇಶಿ ಮಹಿಳೆ ವೇಶ್ಯಾವಾಟಿಕೆ ದಂಧೆಯಲ್ಲಿ ಸಕ್ರಿಯವಾಗಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರವಾಸಿ ವೀಸಾದೊಂದಿಗೆ ಬಂದಿದ್ದ ವಿದೇಶಿ ಮಹಿಳೆ ಬೇರೆ ದೇಶದ ಮಹಿಳೆಯರನ್ನು ಕರೆಸಿಕೊಂಡು ಫೈಸಲ್ ಜೊತೆಗೆ ದಂಧೆ ನಡೆಸುತ್ತಿದ್ದಳು ಎನ್ನಲಾಗಿದೆ.