alex Certify ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ಹೊರ ರಾಜ್ಯದ ಯುವತಿಯರ ಕರೆತಂದು ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ಹೊರ ರಾಜ್ಯದ ಯುವತಿಯರ ಕರೆತಂದು ದಂಧೆ ನಡೆಸುತ್ತಿದ್ದ 6 ಮಂದಿ ಅರೆಸ್ಟ್

ಬೆಂಗಳೂರು: ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿ ಆರು ಮಂದಿಯನ್ನು ಬಂಧಿಸಿದ್ದಾರೆ.

ಆನ್ಲೈನ್ ಮೂಲಕ ಗ್ರಾಹಕರನ್ನು ಸೆಳೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್ಸ್ಪೆಕ್ಟರ್ ಹನುಮಂತರಾಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಮಂಜುನಾಥ, ಶಿವರಾಜ್, ಉಮೇಶ್, ಬಸವರಾಜ, ರಾಯ, ಪ್ರದೀಪ್ ಎಂಬುವರನ್ನು ಬಂಧಿಸಲಾಗಿದ್ದು, ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳು ವೆಬ್ಸೈಟ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದರು. ಸುಂದರ ಯುವತಿಯರ ಫೋಟೋಗಳನ್ನು ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಿ ಮೊಬೈಲ್ ಮೂಲಕ ಲಾಗಿನ್ ಆಗುವ ಗ್ರಾಹಕರನ್ನು ಸೆಳೆಯುತ್ತಿದ್ದರು. ಬೇರೆ ಬೇರೆ ರಾಜ್ಯಗಳಿಂದ ಯುವತಿಯರನ್ನು ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...