
ಬೆಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಹೋಟೆಲ್ ಮೇಲೆ ಬಾಣಸವಾಡಿ ಠಾಣೆ ಪೋಲಿಸರು ದಾಳಿ ನಡೆಸಿದ್ದು, ದಾಳಿಯ ವೇಳೆ ಇಬ್ಬರು ವಿದೇಶಿ ಮಹಿಳೆಯರನ್ನು ರಕ್ಷಿಸಿದ್ದಾರೆ.
ಹೆಚ್.ಆರ್.ಬಿ.ಆರ್. ಲೇಔಟ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಮಹಿಳೆಯರನ್ನು ರಕ್ಷಿಸಲಾಗಿದ್ದು, ದಂಧೆಯಲ್ಲಿ ತೊಡಗಿದ್ದ ಹೋಟೆಲ್ ವ್ಯವಸ್ಥಾಪಕ ಕಿರಣ್ ಲಿಂಬು ಎಂಬುವನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ವಿದೇಶಿ ಮಹಿಳೆಯರಿಗೆ ಹೆಚ್ಚಿನ ಹಣದ ಆಮಿಷವೊಡ್ಡಿ ಹೋಟೆಲ್ ಗೆ ಗಿರಾಕಿಗಳನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಮಹಿಳೆಯರನ್ನು ರಕ್ಷಿಸಿ ಅವರ ಸಂಬಂಧಿಕರ ಜೊತೆ ಕಳಿಸಿಕೊಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮ ಜರುಗಿಸಿದ್ದಾರೆ.