ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಲಾಡ್ಜ್ ಮಾಲೀಕ ಮತ್ತು ರೂಂಬಾಯ್ ಹಾಗೂ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬೆಂಗಳೂರು ಮತ್ತು ಯಳಂದೂರು ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.