alex Certify ಲಾಕ್ ಡೌನ್ ಹೊತ್ತಲ್ಲೇ ಹೈಟೆಕ್ ವೇಶ್ಯಾವಾಟಿಕೆ, ಸ್ಪಾ ಹೆಸರಲ್ಲಿ ದಂಧೆ: ದಾಳಿಯಲ್ಲಿ ಸಿಕ್ಕಿದ್ಯಾರು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಹೊತ್ತಲ್ಲೇ ಹೈಟೆಕ್ ವೇಶ್ಯಾವಾಟಿಕೆ, ಸ್ಪಾ ಹೆಸರಲ್ಲಿ ದಂಧೆ: ದಾಳಿಯಲ್ಲಿ ಸಿಕ್ಕಿದ್ಯಾರು ಗೊತ್ತಾ…?

ಮೈಸೂರು: ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.

ಲಾಕ್ಡೌನ್ ಸಂದರ್ಭದಲ್ಲೂ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಡಾವಣೆಯ ಮನೆಯಲ್ಲಿ ದಂಧೆ ನಡೆಸಿದ್ದು, ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಸಂಚರಿಸುವುದನ್ನು ಗಮನಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸ್ಪಾ ದಲ್ಲಿ ಮಸಾಜ್ ಮತ್ತು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು.

ಆನ್ಲೈನ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದ ಆರೋಪಿಗಳು ಸಮಯ ನಿಗದಿ ಮಾಡಿ ಕರೆಸಿಕೊಳ್ಳುತ್ತಿದ್ದರು. ಯುವತಿಯರಿಂದ ಮಸಾಜ್ ಮಾಡಿಸುತ್ತಿದ್ದರಲ್ಲದೇ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಸ್ಪಾದಲ್ಲಿ ಅನೈತಿಕ ದಂಧೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದು, ದಂಧೆ ನಡೆಸುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಮನೆ ಬಾಡಿಗೆ ನೀಡಿದ ಮಾಲೀಕನ ಮೇಲೆ ಕೇಸು ದಾಖಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...