ಬೆಂಗಳೂರು: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರತಿಷ್ಠಿತ ಖಾಸಗಿ ಹೋಟೆಲ್ ಮೇಲೆ ದಾಳಿ ನಡೆಸಲಾಗಿದ್ದು, ಓರ್ವ ಯುವತಿಯನ್ನು ರಕ್ಷಿಸಿ ಕಬ್ಬನ್ ಪಾರ್ಕ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ.
ವೇಶ್ಯಾವಾಟಿಕೆ ದಂಧೆಯಲ್ಲಿ ಭಾಗಿಯಾಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಸಮೀಪದಲ್ಲಿರುವ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದರೂ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ. ದಾಳಿ ಬಳಿಕ ಯುವತಿಯನ್ನು ಠಾಣೆಗೆ ಕರೆತರಲು ಹೈಡ್ರಾಮಾ ನಡೆಸಲಾಗಿದೆ. ಬೆಂಗಳೂರು ಸುತ್ತಾಡಿಸಿ ಕಬ್ಬನ್ ಪಾರ್ಕ್ ಠಾಣೆಗೆ ಕರೆತರಲಾಗಿದ್ದು, ಆರೋಪಿಗಳ ರಕ್ಷಣೆಗೆ ಸಹಕರಿಸಿದ ಶಂಕೆ ವ್ಯಕ್ತವಾಗಿದೆ. ಪ್ರಕರಣ ಮುಚ್ಚಿ ಹಾಕಲು ಪೊಲೀಸರು ಪ್ರಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.