
ಬೆಂಗಳೂರು: ಕೆಲಸ ಕೊಡಿಸುವ ಆಮಿಷವೊಡ್ಡಿ ಯುವತಿಯರನ್ನು ಕರೆತಂದು ಪಿಜಿಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ 9 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್ ನ ಪಿಜಿ ಒಂದರಲ್ಲಿ ಯುವತಿಯರನ್ನು ಕೂಡಿಹಾಕಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಕೆಲಸದ ಆಮಿಷವೊಡ್ಡಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ದಾಳಿ ಮಾಡಿ 9 ಮಂದಿಯನ್ನು ಬಂಧಿಸಿದ್ದಾರೆ. ದಾಳಿಯ ವೇಳೆ 26 ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.