ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ.
ಹೊಸಪೇಟೆಯ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ಮೇಲೆ ಜಂಟಿ ದಾಳಿ ನಡೆಸಲಾಗಿದ್ದು, ದಾಳಿಯ ವೇಳೆ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ. ಕೊಲ್ಕತ್ತಾ ಮೂಲದ ಇಬ್ಬರು, ಗುಂತಕಲ್ ಮತ್ತು ಕೂಡ್ಲಿಗಿ ಮೂಲದ ತಲಾ ಒಬ್ಬರು ಸೇರಿ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ.
ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ವಿಜಯನಗರ ಜಿಲ್ಲೆ ಮತ್ತು ಕೊಲ್ಕತ್ತಾ ಮೂಲದ 10 ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಸಪೇಟೆ ಟೌನ್ ಠಾಣೆ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ.