alex Certify ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ದಾಳಿ ವೇಳೆ ನಾಲ್ವರು ಮಹಿಳೆಯರ ರಕ್ಷಣೆ, 10 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ದಾಳಿ ವೇಳೆ ನಾಲ್ವರು ಮಹಿಳೆಯರ ರಕ್ಷಣೆ, 10 ಮಂದಿ ಅರೆಸ್ಟ್

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ.

ಹೊಸಪೇಟೆಯ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ಮೇಲೆ ಜಂಟಿ ದಾಳಿ ನಡೆಸಲಾಗಿದ್ದು, ದಾಳಿಯ ವೇಳೆ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ. ಕೊಲ್ಕತ್ತಾ ಮೂಲದ ಇಬ್ಬರು, ಗುಂತಕಲ್ ಮತ್ತು ಕೂಡ್ಲಿಗಿ ಮೂಲದ ತಲಾ ಒಬ್ಬರು ಸೇರಿ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ.

ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ವಿಜಯನಗರ ಜಿಲ್ಲೆ ಮತ್ತು ಕೊಲ್ಕತ್ತಾ ಮೂಲದ 10 ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಸಪೇಟೆ ಟೌನ್ ಠಾಣೆ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...