ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಮೂರು ಲಾಡ್ಜ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದ್ದು, ಲಾಡ್ಜ್ ಮಾಲೀಕರು ಸೇರಿದಂತೆ 8 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ದಾಳಿಯ ವೇಳೆ ಮಹಾರಾಷ್ಟ್ರ ಹಾಗೂ ಪಶ್ಚಿಮ ಬಂಗಾಳದ 7 ಮಹಿಳೆಯರನ್ನು ರಕ್ಷಿಸಲಾಗಿದೆ. ಹೊರ ರಾಜ್ಯದಿಂದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿರುವುದು ತನಿಖೆಯಲ್ಲಿ ಗೊತ್ತಾಗಿದೆ.
ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.ವೈ.ಎಸ್.ಪಿ. ಜಗದೀಶ ಅವರ ಮಾರ್ಗದರ್ಶನದಲ್ಲಿ ಇಂಡಿ ಗ್ರಾಮೀಣ ಸಿಪಿಐ ಎಂ.ಎಂ. ಡಪ್ಪಿನ, ಶಹರ ಪೊಲೀಸ್ ಠಾಣೆ ಪಿಎಸ್ಐ ವಿನೋದ ದೊಡ್ಮನಿ, ಮಹಿಳಾ ಪಿಎಸ್ಐ ರೇಣುಕಾ ಹಳ್ಳಿ, ಸಿಬ್ಬಂದಿಗಳಾದ ಮಳಿಗೆಪ್ಪ ಪೂಜಾರಿ, ಎಂ.ಜಿ. ಸಾವಳೆ, ಸಿ. ಎಸ್. ರಾಥೋಡ್, ಎಂ.ಎಸ್. ಗಂಗನಹಳ್ಳಿ, ಜೆ.ಬಿ. ಕಳಾವಂತ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.